ಬೆಂಗಳೂರು : ನಿಮ್ಮ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಕೃಷಿಯೇತರ ಜಮೀನಿನ ಇ-ಖಾತಾ ಪಡೆದುಕೊಳ್ಳಿ. https://eswathu.karnataka.gov.in/ ಪೋರ್ಟಲ್‌ನಲ್ಲಿಯೇ ಸಿಗಲಿದೆ ನಮೂನೆ 9 ಮತ್ತು ನಮೂನೆ 11.
ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ, ಗ್ರಾಮೀಣ ಪ್ರದೇಶದ ಜನರು https://eswathu.karnataka.gov.in ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಕೃಷಿಯೇತರ ಜಮೀನಿಗೆ ಇ-ಖಾತಾ ಪಡೆಯಲು ಅವಕಾಶ ನೀಡಲಾಗಿದೆ.
ಇ-ಸ್ವತ್ತು ಸಹಾಯವಾಣಿ ಸಂಖ್ಯೆ- 9483476000
ಇ-ಸ್ವತ್ತು ತಂತ್ರಾಂಶದಲ್ಲಿನ ಬದಲಾವಣೆಗಳು
ಸಾರ್ವಜನಿಕರು ಮನೆಯಲ್ಲಿದ್ದೇ ಆಸ್ತಿ ದಾಖಲೆಗಳನ್ನು ಪಡೆಯಬಹುದು.
ಇ-ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದು.
ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ.
ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ.
ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳ ನಿಗದಿ.
ಗ್ರಾಮ ಪಂಚಾಯತಿ ಸೇವೆಗಳ ಶುಲ್ಕ ಹಾಗೂ ಮ್ಯುಟೇಶನ್ ಶುಲ್ಕ ತಂತ್ರಾಂಶದ ಮೂಲಕವೇ ನಿರ್ಧಾರ.

































