ಬೆಂಗಳೂರು:ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು.
ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್ ಗುಡ್ ನ್ಯೂಸ್ ನೀಡಿದೆ.
ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.
ಬಾಕಿ ಇರುವ ವೇತನ ಹಿಂಬಾಕಿಯನ್ನು ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ದೀರ್ಘಕಾಲದಿಂದ ಬಾಕಿ ಇದ್ದ ಸಾರಿಗೆ ನೌಕರರ 26 ತಿಂಗಳ ವೇತನ ಹಿಂಬಾಕಿಯ ಮೊದಲ ಹಂತವಾಗಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.































