ಬೆಂಗಳೂರು: ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ, 51 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗ ತೆರೆಯಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದ್ದು, ಇದೀಗ ಮತ್ತೆ 42 ಶಾಲೆಗಳಿಗೆ ಎಲ್ಕೆಜಿ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಅನುಮತಿ ನೀಡಿದ್ದಾರೆ.
286 ಪಬ್ಲಿಕ್ ಶಾಲೆಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳು ದಾಖಲಾದ ಹಿನ್ನೆಲೆಯಲ್ಲಿ 51 ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ತಿಳಿಸಲಾಗಿದೆ. ಹೊಸದಾಗಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಒಂದನೇ ತರಗತಿಯಿಂದ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮಕ್ಕೆ ಅವಕಾಶ ನೀಡಲು ಹೆಚ್ಚುವರಿ ವಿಭಾಗ ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು.