ಬೆಂಗಳೂರು: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 ಸಂಚಾರಿ ಆರೋಗ್ಯ ಘಟಕ ಆ್ಯಂಬುಲೆನ್ಸ್ ವಾಹನಗಳನ್ನು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ.
ಈ ಬಳಿಕ ಮಾತನಾಡಿದ ಅವರು, ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದೆಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೆ ದೇಶ ನಿರ್ಮಾತೃಗಳು ಎಂದು ಹೇಳಿದ್ದಾರೆ.