ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ 5600, ಬೇರೆ ಕಡೆ 5 ಸಾವಿರ ಒಟ್ಟಾರೆಯಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ. ಶಿಕ್ಷಣ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು ಈ ಬಾರಿಯ ಬಜೆಟ್‌ನಲ್ಲಿ 45 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.