ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು ಮತ್ತು 250 ಕರ್ತವ್ಯ ವೈದ್ಯಾಧಿಕಾರಿಗಳನ್ನು ಮಾಸಿಕ ಸಂಭಾವನೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮಂಜೂರಾದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ನಿಯಮದ ಅನ್ವಯ ಆರು ವರ್ಷ ಗ್ರಾಮೀಣ ಸೇವೆ ಪೂರ್ಣಗೊಳಿಸಿದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಕಾತಿಗೆ ಅವಕಾಶವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಶುಭಂ ಶುಕ್ಲಾ ಆದೇಶದಲ್ಲಿ ತಿಳಿಸಿದ್ದಾರೆ.