ಬೆಂಗಳೂರು: ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆ ಮನೆಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಬಿಜೆಪಿಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವವರ ಪೈಕಿ ಸುಮಾರು 20 ಲಕ್ಷ ಅನರ್ಹರಿದ್ದಾರೆ. ಇವರೆಲ್ಲರೂ ಎಪಿಎಲ್ ಕಾರ್ಡ್ ಪಡೆಯಬೇಕಿತ್ತು. ಈ ಹಿಂದೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲು ಪರಿಷ್ಕರಣೆಗೆ ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ, ಈಗ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗ ಸೇರಿದಂತೆ ಮುಂತಾದವರನ್ನು ಒಳಗೊಂಡ ಸಮಿತಿ ರಚಿಸಿ, ಈ ಸಮಿತಿ ಮೂಲಕ ಖುದ್ದಾಗಿ ಪರಿಶೀಲಿಸಲು ನಿರ್ಧರಿಸಲಾಗಿದೆ ಎಂದರು.
ಸುಮಾರು 91 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಪರಿಷ್ಕರಣೆ ಮಾಡಲಾಗುವುದು. ಇದಕ್ಕೆ ಎಲ್ಲ ಪಕ್ಷದ ನಾಯಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೂ ಮುನ್ನ ಮಾತನಾಡಿದ ಸಿ.ಟಿ.ರವಿ, ಕಳೆದ ವರ್ಷದಿಂದ ಯಾರಿಗೂ ಪಡಿತರ ಚೀಟಿ ಕೊಡದೆ ಸ್ಥಗಿತಗೊಳಿಸಲಾಗಿದೆ. ಅರ್ಜಿ ಹಾಕಿದವರಿಗೂ ಕೊಡುತ್ತಿಲ್ಲ. ಹೊಸ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ನಿಗದಿತ ದಿನದಲ್ಲಿ ಮಾತ್ರ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸರ್ವರ್ ಡೌನ್ ಸಮಸ್ಯೆ ಎದುರಾಗುತ್ತಿದೆ.
ಈ ಎಲ್ಲ ಸಮಸ್ಯೆ ಬಗೆಹರಿಸಬೇಕು. ಕಾಲಮಿತಿಯಲ್ಲಿ ಪಡಿತರ ಚೀಟಿ ನೀಡಬೇಕು ಎಂದು ಆಗ್ರಹಿಸಿದರು. ಸುಮಾರು 20 ಲಕ್ಷಕ್ಕಿಂತಲೂ ಹೆಚ್ಚು ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದು, ಒಂದು ವೇಳೆ ಮಿತಿಗಿಂತ ಹೆಚ್ಚಿನ ಆದಾಯ ಹೊಂದಿದ್ದರೆ ಬಿಪಿಎಲ್ ಬದಲಾಗಿ ಎಪಿಎಲ್ ಕಾರ್ಡ್ ವಿತರಣೆ ಅದಾದ ಬಳಿಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ವಿತರಣೆ ಆರಂಭಿಸಲಾಗುವುದು ಎಂದು ಸಚಿವ ಮುನಿಯಪ್ಪ ಭರವಸೆ ನೀಡಿದರು. 91000 ಅರ್ಜಿ ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು. Two ministers words war ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಕೈಕೈ ಮಿಲಾಯಿಸುವ ಹಂತ ತಲುಪಿದ ಸಚಿವರಿಬ್ಬರ ವಾಗ್ಯುದ್ಧ? ಅಷ್ಟಕ್ಕೂ ಏನಾಯ್ತು?