ಬೆಂಗಳೂರು: ನೇರ ನೇಮಕಾತಿ ಮೂಲಕ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶಿಸಿದೆ. ವಿಧಾನ ಪರಿಷತ್ ನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಖಾಲಿ ಇರುವ 2000 ಬೋಧಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಬರುವ ಸರ್ಕಾರ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿವಿಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಬೋಧಕ ವೃಂದದ 2 ಸಾವಿರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಡಾ. ತಳವಾರ್ ಸಾಬಣ್ಣ ಅವರು ಪ್ರಸ್ತಾಪಿಸಿದ ಸೂಚನೆಗೆ ಉತ್ತರ ನೀಡಿದ್ದಾರೆ.

































