ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ..!

WhatsApp
Telegram
Facebook
Twitter
LinkedIn

 

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 2026-27ನೇ ಶೈಕ್ಷಣಿಕ ಸಾಲಿಗಾಗಿ ಒಟ್ಟು 51,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಪ್ರಾರಂಭದ ದಿನದಿಂದಲೇ ಬೋಧನಾ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ಮಾಡಲು, ರಾಜ್ಯ ಸರ್ಕಾರವು ಬರೋಬ್ಬರಿ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹಸಿರು ನಿಶಾನೆ ತೋರಿದೆ.”

 

ಶಾಲೆಗಳ ವಿಂಗಡಣೆ

 

ಪ್ರಾಥಮಿಕ ಶಾಲೆಗಳು: 40,000 ಅತಿಥಿ ಶಿಕ್ಷಕರು.

ಪ್ರೌಢ ಶಾಲೆಗಳು: 11,000 ಅತಿಥಿ ಶಿಕ್ಷಕರು.

ನೇಮಕಾತಿಯ ಅವಧಿ: ಕಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಸದರಿ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಈ ನೇಮಕಾತಿ ಅನ್ವಯವಾಗುತ್ತದೆ.

ಆದೇಶದ ಹಿನ್ನೆಲೆ: ಶಾಲಾ ಪ್ರಾರಂಭದ ದಿನದಿಂದಲೇ ಬೋಧನಾ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಯಾಗಬಾರದು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಕರ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon