ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡ ಹೆಸರಿಡಬೇಕು ಎಂದು ಕನ್ನಡ ಪರ ಸಂಘನೆಗಳು ಆಗ್ರಹಿಸಿವೆ.
ಮುಂಬೈ, ಚೆನ್ನೈ ಮೊದಲಾದ ಪುರಸಭೆಗಳು ರಾಜ್ಯ ಭಾಷೆಗೆ ಪ್ರಾಧಾನ್ಯತೆ ನೀಡಿವೆ. ಅದೇ ರೀತಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡ ಹೆಸರಿಡಬೇಕು ಎಂದು ಕನ್ನಡ ಸಂಘಟನೆಗಳು ಆಗ್ರಹ ಮಾಡಿರುವುದಾಗಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ (ಕೆಡಿಎ) ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ ಅವರು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕನ್ನಡ ಹೆಸರಿಡುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ಹೇಳಿದ್ದರು. ಆದರೆ ಇಲ್ಲಿಯವರೆಗೆ ಕನ್ನಡ ಹೆಸರಿನ ಯಾವುದೇ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೆಲವು ಪ್ರದೇಶಗಳಲ್ಲಿ ಕನ್ನಡೇತರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಐದು ನಿಗಮಗಳಲ್ಲಿ ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆಯೂ ಕೆಡಿಎ ಸರ್ಕಾರಕ್ಕೆ ಈ ಹಿಂದೆಯೇ ಪತ್ರ ಬರೆದಿತ್ತು.