ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣವನ್ನು ಆಗಸ್ಟ್ 2ರಿಂದ ಹಂತ ಹಂತವಾಗಿ ಮಹಿಳೆಯರ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆ ಸರ್ಕಾರ ಆರಂಭಿಸಿದೆ.
ಹಲವಾರು ಫಲಾನುಭವಿಗಳಿಗೆ ಈಗಾಗಲೇ ಹಣ ಜಮಾ ಆಗಿದ್ದು, ಕೆಲವರ ಪಾವತಿಯಲ್ಲಿ ತಾಂತ್ರಿಕ ತೊಂದರೆಗಳಿಂದ ಸ್ವಲ್ಪ ವಿಳಂಬವಾಗಿದೆ. ಆದರೂ,
ಈ ಹಣ ಎಲ್ಲರ ಖಾತೆಗೆ ತಲುಪುವಂತೆ ಕ್ರಮ ಕೈಗೊಳ್ಳಲಾಗಿದೆ. ಕೆಲವೇ ದಿನಗಳಲ್ಲಿ ಉಳಿದ ಮಹಿಳೆಯರಿಗೂ ಹಣ ಜಮಾ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.