ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸಿದ ವಿಚಾರದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಬೆಳಗಾವಿಯಲ್ಲೂ ಮತ್ತೊಂದು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದ ಅವರು, ಆ.30ರಂದು ಯೋಜನೆಗೆ ಚಾಲನೆ ಸಿಗಲಿದ್ದು, ಎಲ್ಲಾ ಫಲಾನುಭವಿಗಳ ಖಾತೆಗೂ ಅಂದೇ ಹಣ ಜಮಾ ಆಗಲಿದೆ. ಕೂಡಲೇ ಸಂದೇಶ ಕೂಡ ಬರಲಿದೆ. ಸರ್ಕಾರಕ್ಕೆ ಹಣದ ಕೊರತೆಯಾಗಿಲ್ಲ ಎಂದಿದ್ದಾರೆ.