ಹೆಚ್.ಹನುಮಂತಪ್ಪನವರ ನಿಧನ: ಗಣ್ಯರ ಅಂತಿಮ ದರ್ಶನ.!

WhatsApp
Telegram
Facebook
Twitter
LinkedIn

 

ಚತ್ರದುರ್ಗ : ಭಾನುವಾರ ನಿಧನರಾದ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪನವರ ಪಾರ್ಥಿವ ಶರೀರರವನ್ನು ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸೋಮವಾರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ನೆಹರು ನಗರದಲ್ಲಿರುವ ಅವರ ನಿವಾಸದಿಂದ ಶಾರದಾ ಬ್ರಾಸ್ ಬ್ಯಾಂಡ್ನೊಂದಿಗೆ ಹೆಚ್.ಹನುಮಂತಪ್ಪನವರ ಮೃತ ದೇಹವನ್ನು ಅಂಬ್ಯುಲೆನ್ಸ್ನಲ್ಲಿ ಮೆರವಣಿಗೆ ಮೂಲಕ ತಂದು ಕೆಲವು ನಿಮಿಷಗಳ ಕಾಲ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಇರಿಸಿ ನಂತರ ಸರಸ್ವತಿ ಕಾನೂನು ಕಾಲೇಜು ಆವರಣದಲ್ಲಿ ಒಂದು ಗಂಟೆಗಳ ಕಾಲ ಕಾನೂನು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕ ವೃಂದದವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.

ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ನಿವೃತ್ತ ಡಿ.ವೈ.ಎಸ್ಪಿ, ಬಸವರಾಜ್, ಆರ್ಥಿಕ ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ಹಿರಿಯ ನ್ಯಾಯವಾದಿಗಳಾದ ಫಾತ್ಯರಾಜನ್, ಡಿ.ಕೆ.ಶೀಲಾ, ಕಾನೂನು ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಕೆ.ಎಸ್.ಸುಧಾದೇವಿ ಸೇರಿದಂತೆ ಅನೇಕ ಗಣ್ಯರು ಹೆಚ್.ಹನುಮಂತಪ್ಪನವರಿಗೆ ಅಂತಿಮ ನಮನ ಸಲ್ಲಿಸಿದರು.

 

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon