ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕ ಸಂಬಂಧಿಸಿದಂತೆ ಹರ್ಯಾಣ ಮೂಲದ ವೈದ್ಯೆ ಪ್ರಿಯಾಂಕಾ ಶರ್ಮಾ ಎಂಬುವವರನ್ನು ಕೂಡ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಹರಿಯಾಣದ ವೈದ್ಯೆ ಪ್ರಿಯಾಂಕಾ ಶರ್ಮಾ ಎಂಬಾಕೆಯನ್ನು ಜಮ್ಮು ಕಾಶ್ಮೀರದಲ್ಲಿ ವಿಚಾರಣೆಗೊಳಪಡಿಸಿವೆ ಎಂದು ವರದಿಯಾಗಿದೆ.
ದಕ್ಷಿಣ ಕಾಶ್ಮೀರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಿಯಾಂಕಾ ಶರ್ಮಾ, ಆಕೆಗೆ ವೈಟ್ ಕಾಲರ್ ಉಗ್ರ ಜಾಲದ ಸಂಪರ್ಕವಿದೆ ಎಂದು ಆರೋಪಿಸಲಾಗಿತ್ತು.
ಪ್ರಿಯಾಂಕಾ ಶರ್ಮಾ ನಿನ್ನೆ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದರು. ಬಳಿಕ ಸಂಜೆ ವೇಳೆಗೆ ವಿಚಾರಣೆ ಮುಗಿಸಿಕೊಂಡು ವಾಪಸ್ ಆಗಿದ್ದಾರೆ ಎಂದು ಅವರ ಸಹೋದರ ತಿಳಿಸಿದ್ದಾರೆ.
ಹರಿಯಾಣದ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ಎಂಬಾಕೆಯನ್ನು ‘ವೈಟ್ ಕಾಲರ್’ ಉಗ್ರ ಜಾಲಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ದಕ್ಷಿಣ ಕಾಶ್ಮೀರದ ಅನಂತ್ನಾಗ್ನಲ್ಲಿ ವಿಚಾರಣೆಗೊಳಪಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ತಂಡವು ಶರ್ಮಾಳ ನಿವಾಸಕ್ಕೆ ತೆರಳಿ ಆಕೆಯನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ದರು ಎಂದು ಹೇಳಲಾಗಿದೆ.
ಈ ವೇಳೆ ಆಕೆಯ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಗಳನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿವೆ. ಅನಂತ್ನಾಗ್ನ ಸರ್ಕಾರಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಮಾಜಿ ಸಿಬ್ಬಂದಿ ಅದೀಲ್ ಬಂಧನದ ನಂತರ ಪ್ರಿಯಾಂಕಾ ಹೆಸರು ಕೇಳಿಬಂದಿದೆ. ಈ ಉಗ್ರ ಜಾಲಕ್ಕೆ ವಸತಿ ವ್ಯವಸ್ಥೆ ಮತ್ತು ಆರ್ಥಿಕ ಬೆಂಬಲವನ್ನು ಒದಗಿಸುತ್ತಿದ್ದ ಆರೋಪ ಆಕೆಯ ಮೇಲಿದೆ ಎನ್ನಲಾಗಿದೆ.
































