ಹಾಸನ: ಪಾಳು ಬಿದ್ದ ಕಟ್ಟಡ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನದ ಬೇಲೂರು ಪಟ್ಟಣದಲ್ಲಿ ಘಟನೆ ನಡೆದಿದೆ.
ಪಾಳು ಬಿದ್ದ ಕಟ್ಟಡದ ಕೆಳಗೆ ಮಹಿಳೆಯರು ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಮೂವರು ಮಹಿಳೆಯರಯ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಟ್ಟಡಗಳ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು, ರಕ್ಷಣಾ ಸಿಬ್ಬಂದಿ, ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.
ಬೀದಿ ಬದಿ ವ್ಯಾಪಾರಿ, ಆಶಾ, ದೀಪು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ