ಚಿತ್ರದುರ್ಗ : 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಐ.ಐ.ಎಸ್.ಸಿ, ಐ.ಐ.ಟಿ. ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಪ್ರವೇಶ ಪಡೆದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ, 200 ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವಿದ್ಯಾರ್ಥಿಗೂ ರೂ.15,000/- ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಏ.11 ಕಡೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಬೆಳಿಗ್ಗೆ 10 ರಿಂದ ಸಂಜೆ 5:30 ಒಳಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-225427 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.