ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 2ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಏಪ್ರಿಲ್ 3ರಂದು ಕರಾವಳಿ ಮತ್ತು ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಅತಿ ವೇಗದ ಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ. !