ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ಜೂನ್ 10ರ ವರೆಗೆ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಚುರುಕಾಗಿರುವದರಿಂದ ಈ ಜಿಲ್ಲೆಗಳಲ್ಲಿ ಜೂನ್ 10 ರವರೆಗೆ ಭಾರೀ ಮಳೆಯಾಗುವ ಸಂಭವ ಇದೆ.
ಜೂನ್ 8 ರಿಂದ 10 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಜೂನ್ 8 ಮತ್ತು 9 ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 10 ರಂದು ಭಾರಿ ಮಳೆ ಆಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.






























