ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಯಚೂರಿನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನು ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಈ ವೇಳೆ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಸಹ ಹೆಚ್ಚಾಗುವ ಸಾಧ್ಯತೆಗಳಿವೆ