Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಈ 7 ಜಿಲ್ಲೆಗಳಲ್ಲಿ ಭಾರೀ ಮಳೆ.! ಯೆಲ್ಲೋ ಅಲರ್ಟ್.!

0

 

ಬೆಂಗಳೂರು: ರಾಜ್ಯದ ಹಲವೆಡೆ ಶುಕ್ರವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಶನಿವಾರವೂ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಭಾನುವಾರದಿಂದ ರಾಜ್ಯದ ಹಲವೆಡೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ ನಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ತಿಳಿಸಿದೆ.

 

 

Leave A Reply

Your email address will not be published.