ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು IMD ವರದಿ ಹೇಳಿದೆ.