ಬೆಂಗಳೂರು: ಫೆಂಗಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಲಿದ್ದು, ಬೆಂಗಳೂರು ಸೇರಿ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂ. ಗ್ರಾಮಾಂತರ, ಬೆಂ. ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.


































