ತಿರುವನಂತಪುರಂ: ಕೇರಳದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ನ್ನು ಘೋಷಿಸಲಾಗಿದೆ.
ಕೇರಳದ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಕೇರಳದಲ್ಲಿ ಬೇಸಿಗೆಯ ಬಿಸಿ ಜೋರಾಗಿಯೇ ಇದ್ದು, ತಾಪಮಾನವು ಸಾಮಾನ್ಯಕ್ಕಿಂತ 2°C ನಿಂದ 3°C ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಕೇಂದ್ರ ಹವಾಮಾನ ಇಲಾಖೆಯು ದಿನಾಂಕ 01/03/2025 ರಂದು ದಕ್ಷಿಣ ಕೇರಳ ಕರಾವಳಿಯಲ್ಲಿ ಮೀನುಗಾರಿಕೆ ಮಾಡಬಾರದು ಮತ್ತು ದಿನಾಂಕ 01/03/2025 & 02/03/2025 ರಂದು ಲಕ್ಷದ್ವೀಪ ಪ್ರದೇಶದಲ್ಲಿ ಮೀನುಗಾರಿಕೆ ಮಾಡಬಾರದು ಎಂದು ತಿಳಿಸಿದೆ.