ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. 24 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹೇಳಲಾಗಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಕೋಲಾರ, ರಾಮನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.