ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದೆರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ವಾತಾವರಣ ಸ್ವಲ್ಪ ತಂಪಾಗಿದೆ.
ಇಂದು ಸಹ ಕೆಲ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಮೇ 19ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
				
															
                    
                    
                    
                    
































