ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಇನ್ನೂ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯ ಕೆಲವೆಡೆ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.