ಬೆಂಗಳೂರು: ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಉಡುಪಿ, ಮಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಮಂಗಳೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳವರೆಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ತಹಶೀಲ್ದಾರ್ ಇಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ನದಿ, ಸಮುದ್ರ ತೀರ ಪ್ರದೇಶಕ್ಕೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ, ಐಟಿಐ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪಾ ಆದೇಶ ಹೊರಡಿಸಿದ್ದಾರೆ.