ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 10ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಜುಲೈ 6 ಮತ್ತು 7ರಂದು ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 10ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.