ನವದೆಹಲಿ : ಬೆಳಿಗ್ಗೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದ್ವಾರಕಾದ ನಜಾಫ್ಗಢ ಪ್ರದೇಶದಲ್ಲಿ ನಡೆದಿದೆ.
ಬೆಳಗಿನ ಜಾವದಿಂದ ಭಾರೀ ಮಳೆ ಸುರಿಯುತ್ತಿದ್ದು, ಗಂಟೆಗೆ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಪರಿಣಾಮ ಈ ಅವಘಡ ಸಂಭವಿಸಿದೆ. ಮರ ಉರುಳಿ ಬಿದ್ದ ಪರಿಣಾಮ ಮನೆ ಕುಸಿದಿದ್ದು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಜ್ಯೋತಿ (26) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಾರಕಾ, ಗುರುಗ್ರಾಮ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮರಗಳು ನೆಲಕ್ಕುರುಳಿವೆ.ದೆಹಲಿಯ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಗಾಳಿಯ ತೀವ್ರತೆಯಿಂದಾಗಿ 100ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಏರ್ ಇಂಡಿಯಾ ವಿಮಾನ ವಿಳಂಬ, ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ನೀಡಿದೆ,