ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಬಳಿ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಬೆಳಗ್ಗೆ 9 ಗಂಟೆಗೆ ನಡೆದಿದೆ. ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.