ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಯುಪಿಐನಲ್ಲಿಯೇ ದಂಡ ಪಾವತಿಸುವ ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಜಾರಿಗೆ ಬಂದಿದೆ. ಪೊಲೀಸರಲ್ಲಿರುವ ಉಪಕರಣದಲ್ಲಿ ಸ್ಕ್ಯಾನ್ ಮಾಡಿ ದಂಡ ಪಾವತಿ ಮಾಡಬಹುದು.
ಗೂಗಲ್ ಪೇ, ಫೋನ್ ಪೇ ಮೊದಲಾದ ಯುಪಿಐ ಮೂಲಕವೂ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ಮಂಗಳೂರು ನಗರದಲ್ಲಿ ಇದು ಆರಂಭಿಕ ಹಂತದಲ್ಲಿದೆ. ಇದಕ್ಕಾಗಿ ಹೊಸ ಉಪಕರಣಗಳನ್ನು ಒದಗಿಸಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಪಾವತಿ ವಿಳಂಬವಾಗುತ್ತಿದೆ. ಮುಂದೆ ಸಮರ್ಪಕವಾಗಿ ಅನುಷ್ಠಾನವಾಗಲಿದೆ ಎಂದು ಮಂಗಳೂರು ನಗರ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ತಿಳಿಸಿದ್ದಾರೆ.