ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಕಚೇರಿಯ ಅಭಿಲೇಖಾಲಯ ಡಿಜಿಟಲೀಕರಣ ವ್ಯವಸ್ಥೆಗೆ ಶನಿವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ ನೀಡಿದರು.
ಚಿತ್ರದುರ್ಗ ತಾಲ್ಲೂಕು ಕಚೇರಿಯ ಅಭಿಲೇಖಾಲಯ ಶಾಖೆಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು,. ನಂತರ ಅಭಿಲೇಖಾಲಯ ಶಾಖೆಯನ್ನು ಪರಿಶೀಲನೆ ನಡೆಸಿದರು.
“ಇನ್ನೂ ಮುಂದೆ ದಾಖಲೆ ಸುಭದ್ರ, ಶಾಶ್ವತ ನಿಮ್ಮ ಕೈಯಲ್ಲೇ, ನೇರ ಸುಲಭ ಲಭ್ಯತೆ, ತಿದ್ದಲು ಕಳೆಯಲು ಅಸಾಧ್ಯ. ತಂತ್ರಜ್ಞಾನದಿಂದ ತ್ವರಿತ ಸರಳ ಆಡಳಿತ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಗ್ರೇಡ್-2 ತಹಶೀಲ್ದಾರ್ ನಾಗರಾಜ್ ಸೇರಿದಂತೆ ತಾಲ್ಲೂಕು ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.