ನವದೆಹಲಿ. ಅಚಲ ಪ್ರಯತ್ನ ಮತ್ತು ದೃಢ ಸಂಕಲ್ಪವಿದ್ದರೆ ಎಂತಹ ಸವಾಲುಗಳನ್ನು ಬೇಕಾದರೂ ಎದುರಿಸಬಹುದು ಎಂಬುದಕ್ಕೆ ಜಮ್ಮು ಮತ್ತು ಕಾಶ್ಮೀರದ ಡಾ. ಇರಾಮ್ ಚೌಧರಿ ಅವರು ನಿದರ್ಶನವಾಗಿದ್ದಾರೆ.
ಡಾ. ಇರಾಮ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯವರು. 2018ರಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ ಇರಾಮ್, ದೇಶಸೇವೆ ಮಾಡುವ ಉದ್ದೇಶದಿಂದ ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸುತ್ತಾರೆ. ಇರಾಮ್ ಅವರು ತಮ್ಮ ಮೊದಲ ಮೂರು ಪ್ರಯತ್ನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದರು. ಆದರೂ ಛಲ ಬಿಡದೆ ನಾಲ್ಕನೇ ಬಾರಿಗೆ 2024ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದ ಇರಾಮ್ ಅವರು ಅಖಿಲ ಭಾರತ ಮಟ್ಟದಲ್ಲಿ 40ನೇ ರ‍್ಯಾಂಕ್ ಪಡೆದಿದ್ದಾರೆ.
ಇರಾಮ್ ಅವರು ಯಾವುದೇ ಕೋಚಿಂಗ್ ಸೆಂಟರ್‌ಗೆ ಸೇರದೆ ಕೇವಲ ಸ್ವಯಂ ಅಧ್ಯಯನದ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಲಕ್ಷಾಂತರ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಡಾ. ಇರಾಮ್ ಚೌಧರಿ ಅವರು ಸ್ಫೂರ್ತಿಯಾಗಿದ್ದಾರೆ. ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸವಿದ್ದರೆ ಸೋಲನ್ನೇ ಯಶಸ್ಸಿನ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಬಹುದು ಎಂಬುದಕ್ಕೆ ಅವರೇ ಸಾಕ್ಷಿ.
































