ಬೆಂಗಳೂ: ಹೋಟೆಲ್ಗಳು, ರೆಸ್ಟೋರೆಂಟ್ಗಳು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆಯ LPG ಸಿಲಿಂಡರ್ಗಳ ಸರಬರಾಜಿನ ಮೇಲಿದ್ದ ಎಲ್ಲಾ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಸಂಪೂರ್ಣವಾಗಿ ಹಿಂಪಡೆದಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲ & ಗ್ಯಾಸ್ ಪೂರೈಕೆಯು ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯ ಈ ನಿರ್ಧಾರವನ್ನು ಇಂದು ಪ್ರಕಟಿಸಿದೆ.































