ದಾವಣಗೆರೆ: ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದಿಂದ ನೀಡುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೆ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಸೆಪ್ಟೆಂಬರ್ 30 ರೊಳಗಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944, 9964760090 ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.