ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025: ಮಾರ್ಚ್ 1 ರಿಂದ 20 ರ ವರೆಗೆ ನಡೆದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ.
ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.