ಬೆಂಗಳೂರು: ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೈಗೊಂಡಿರುವ ಕ್ರಮಗಳ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನ ಭಾರತದ ಮೇಲೆ ಕಿಡಿಗೇಡಿ ಕೃತ್ಯವೆಸಗುವ ಸಾಧ್ಯತೆಯ ಕಾರಣದಿಂದ ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಸ್ತುತ ಭಾರತ-ಪಾಕಿಸ್ತಾನದ ನಡುವಿನ ರಾಜಕೀಯ ಒತ್ತಡದಿಂದಾಗಿ, ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಲು ಕೋರಲಾಗಿದೆ. ಲಕ್ಷಾಂತರ ಜನರು ಪ್ರಯಾಣಿಸುವ ಬೆಂಗಳೂರು ಮೆಟ್ರೋ ರೈಲಿನಲ್ಲಿ ಇನ್ನಷ್ಟು ಬಿಗಿಗೊಳಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಬೈಯಪ್ಪನಹಳ್ಳಿ ಮತ್ತು ಎಂಜಿ ರೋಡ್ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಎಐ ಆಧಾರಿತ ಸುಧಾರಿತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ನಿಲ್ದಾಣದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು 24/7 ನಿಗಾ ಇಡಲಿದ್ದು, ಎಐ ತಂತ್ರಜ್ಞಾನದ ಸಹಾಯದಿಂದ ಅನುಮಾನಾಸ್ಪದ ಘಟನೆಗಳು ಅಥವಾ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಲಿವೆ. ನಿಲ್ದಾಣಗಳ ಸುತ್ತಮುತ್ತಲಿನ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಗುರುತಿಸಲು ANPR ತಂತ್ರಜ್ಞಾನವನ್ನು ಬಳಸಲಾಗಿದೆ. ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್ ಮೊರೆ ಹೋದ ಪಾಕ್