ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಧಾರವಾಡ ವಿಭಾಗೀಯ ಪೀಠ ತಡೆ ನೀಡಿದೆ. ಸರ್ಕಾರಿ ಆವರಣದಲ್ಲಿ ಖಾಸಗಿ ಸಂಘಟನೆಗಳು ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಧಾರವಾಡ ವಿಭಾಗೀಯ ಪೀಠಕ್ಕೆ ಪುನಶ್ಚೇತನ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ನ.17ಕ್ಕೆ ವಿಚಾರಣೆಯನ್ನು ಮುಂದೂಡಿ ಪೀಠ ಆದೇಶ ಹೊರಡಿಸಿದೆ. ಸರ್ಕಾರದ ಪರ ವಕೀಲರಿಗೆ ನಾಳೆ (ಅ. 29) ತಕರಾರು ಸಲ್ಲಿಸಲು ಸೂಚನೆ ನೀಡಿದೆ.

































