ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.