ನವದೆಹಲಿ:ರಾಜ್ಯದ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ, ಹೈಕೋರ್ಟ್ ಮಟ್ಟಿಲೇರಿತ್ತು. ಇದೀಗ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಾಧೀಶರು ಇದೀಗ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಹೋಟೆಲ್ ಮಾಲೀಕರ ಸಂಘ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ವೇಳೆ ವಾದ ಆಲಿಸಿದ ಹೈಕೋರ್ಟ್ ನ್ಯಾಯಧೀಶೆ ಜ್ಯೋತಿ ಮುಲಿಮನೆ ಮಹತ್ವದ ಆದೇಶ ನೀಡಿದ್ದು, ಋತುಚಕ್ರದ ರಜೆ ನೀಡಿ ಸರ್ಕಾರ ಮಾಡಿದ್ದ ಆದೇಶಕ್ಕೆ ತಡೆ ನೀಡಿದ್ದಾರೆ.
ಖಾಸಗಿ ವಲಯದಲ್ಲಿ ಋತುಚಕ್ರ ರಜೆ ಘೋಷಣೆಗೆ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೋಟೆಲ್ ಮಾಲೀಕರ ಸಂಘದ ಪರವಾಗಿ ವಕೀಲರಾದ ಪ್ರಶಾಂತ್ ಬಿ.ಕೆ. ವಾದ ಮಂಡನೆ ಮಂಡಿನೆ ಮಾಡಿದರು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
































