ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಭಾರತ (Pahalgam Terror Attack) ಪ್ರತೀಕಾರ ತೆಗೆದುಕೊಳ್ಳಲು ಯೋಜನೆ ರೂಪಿಸಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಿವಾಸದಲ್ಲಿ ಮೇಲಿಂದ ಮೇಲೆ ಸಭೆಗಳು ನಡೆಯುತ್ತಿವೆ. ಇಂದು ಇಂದು ಎರಡನೇ ಬಾರಿಗೆ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಸಿತು. ಮೊದಲು ನಡೆದಿದ್ದ ಸಂಪುಟ ಸಭೆಯಲ್ಲಿ ರಾಜತಾಂತ್ರಿಕತೆಯ ಮೂಲಕ ಪಾಕಿಸ್ತಾನಕ್ಕೆ ಶಾಕ್ ನೀಡಿದ್ದ ಭಾರತ ಇದೀಗ ಎರಡನೇ ಬಾರಿಗೆ ಪಾಕ್‌ಗೆ ಮರ್ಮಾಘಾತವನ್ನು ನೀಡುವ ನಿರೀಕ್ಷೆ ಇದೆ. ಸಭೆ ಬಳಿಕ ಇಂದು ಮಧ್ಯಾಹ್ನ 3 ಗಂಟೆಗೆ ಸಚಿವರ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ.
ಮಂಗಳವಾರ ಪ್ರಧಾನಿ ಮೋದಿ, ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿತ್ತು. ಸಭೆಯಲ್ಲಿ ಸೇನೆಗೆ ಸಂಪೂರ್ಣ ಸ್ವಾತಂತ್ಯವನ್ನು ನೀಡಲಾಗಿದ್ದು, ಜಾಗ ಹಾಗೂ ಸಮಯ ನೋಡಿ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿ ಎಂದು ಪ್ರಧಾನಿ ಸೂಚನೆಯನ್ನು ನೀಡಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ, ರಕ್ಷಣಾ ಸಚಿವರು, ಗೃಹ ಸಚಿವರು, ಹಣಕಾಸು ಸಚಿವರು ಮತ್ತು ವಿದೇಶಾಂಗ ಸಚಿವರನ್ನು ಒಳಗೊಂಡ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ಸೇರುತ್ತಿರುವುದು ಇದು ಎರಡನೇ ಬಾರಿ. ಈ ಬಾರಿ ಮತ್ತೊಂದು ಮಹತ್ವದ ನಿರ್ಣಯವನ್ನು ಕೈಗೊಳ್ಳುವ ನಿರೀಕ್ಷೆಯಿದೆ.
ಹಿಂದೆ, ಸಿಸಿಪಿಎ ನಿರ್ಣಾಯಕ ಕ್ಷಣಗಳಲ್ಲಿ ಸಭೆ ಸೇರಿತ್ತು. ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಫೆಬ್ರವರಿ 2019 ರಲ್ಲಿ ಅಂತಹ ಒಂದು ಸಭೆ ನಡೆದಿತ್ತು. ಪುಲ್ವಾಮಾ ದಾಳಿಗೆ ಪ್ರತಿಯಾಗಿ ಸೇನೆ ಬಾಲಾಕೋಟ್‌ನಲ್ಲಿ ವೈಮಾನಿಕ ದಾಳಿಯನ್ನು ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು. ಇದೀಗ ಮತ್ತೆ ಯುದ್ಧವಾಗುತ್ತಾ? ಇಲ್ಲ ಮತ್ತೊಂದು ವೈಮಾನಿಕ ದಾಳಿಯಾಗುತ್ತದಯೇ ಎಂಬುದು ಇಂದಿನ ಸುದ್ದಿಗೋಷ್ಠಿ ಬಳಿಕ ತಿಳಿದು ಬರಲಿದೆ.
ಭಾರತದ ಪ್ರತೀಕಾರ ದಾಹಕ್ಕೆ ಪಾಕ್ ತತ್ತರಿಸಿದೆ. ಮುಂದಿನ 24-36 ಗಂಟೆಗಳಲ್ಲಿ ಭಾರತ ತನ್ನ ಭೂಭಾಗದ ಮೇಲೆ ದಾಳಿ ನಡೆಸುತ್ತದೆ ಎನ್ನುವುದಕ್ಕೆ ವಿಶ್ವಾಸಾರ್ಹ ದಾಖಲೆಗಳಿವೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾ ತರಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತದ ಮೇಲಿನ ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.