ತಿರುವನಂತಪುರಂ: ಆಪರೇಷನ್ ಥಿಯೇಟರ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕೆಂದು ತಿರುವನಂತಪುರದ ಸರ್ಕಾರಿ ಮೆಡಿಕಲ್ ಕಾಲೇಜಿನ 7 ಜನ ವಿದ್ಯಾರ್ಥಿನಿಯರು ಜೂನ್ 26ರಂದು ಪ್ರಾಂಶುಪಾಲೆಗೆ ಪತ್ರ ಬರೆದಿದ್ದಾರೆ. ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಮುಸ್ಲಿಂ ಮಹಿಳೆಯರು ತಲೆ ಮುಚ್ಚಿಕೊಳ್ಳುವುದು ಕಡ್ಡಾಯ. ಆಸ್ಪತ್ರೆ ನಿಯಮಗಳ ಪ್ರಕಾರ ಆಪರೇಷನ್ ಥಿಯೇಟರ್‌ನಲ್ಲಿ ಸೂಚನೆಗಳನ್ನು ಅನುಸರಿಸಿ, ಹಿಜಾಬ್ ಧರಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಹೀಗಾಗಿ ಉದ್ದನೆಯ ತೋಳಿನ ಸ್ಕ್ರಬ್ ಜಾಕೆಟ್ ಹಾಗೂ ಸರ್ಜಿಕಲ್ ಹುಡ್ ಧರಿಸಲು ಅವಕಾಶ ಮಾಡಿಕೊಡಬೇಕು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಈ ಸಂಬಂಧ 2020ನೇ ಬ್ಯಾಚ್‌ನ ಮೆಡಿಕಲ್ ವಿದ್ಯಾರ್ಥಿನಿ ಪತ್ರ ಬರೆದಿದ್ದು, ಇದಕ್ಕೆ 2018, 2021, 2022ನೇ ಬ್ಯಾಚ್‌ನ ಕೆಲ ಮುಸ್ಲಿಂ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಶುಂಪಾಲೆ ಡಾ.ಲಿನೆಟ್ ಮೋರಿಸ್, ಆಪರೇಷನ್ ಥಿಯೇಟರ್‌ಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಳ್ಳಲಾಗುತ್ತದೆ. ಅಲ್ಲಿ ರೋಗಿಗಳ ಸುರಕ್ಷತೆಯೇ ಮುಖ್ಯ. ಹೀಗಿರುವಾಗ ವಿದ್ಯಾರ್ಥಿನಿಯರ ಬೇಡಿಕೆಯನ್ನು ಸದ್ಯಕ್ಕೆ ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಚರ್ಚಿಸಲು ಸಮಿತಿ ರಚಿಸಲಾಗಿದ್ದು, ಮುಂದಿನ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ