ಹಿರಿಯೂರು ನಗರಸಭೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ:2024-25ನೇ ಸಾಲಿನ ಮುಖ್ಯಮಂತ್ರಿಗಳ ‘ಅಮೃತ ನಗರೋತ್ಥಾನ’ (ಹಂತ-4) ಯೋಜನೆಯಡಿ ಹಿರಿಯೂರು ನಗರಸಭೆಯ ವ್ಯಾಪ್ತಿಯಲ್ಲಿ ವಾಸಿಸುವ ವಿವಿಧ ವರ್ಗದ ಫಲಾನುಭವಿಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಮೇ 22 ಅರ್ಜಿ ಸಲ್ಲಿಸಲು ಕೊನೆಯ ದಿನ.

ಈ ಯೋಜನೆಯಡಿ ಶೇ.24.10, ಶೇ.7.25 ಹಾಗೂ ಶೇ.5ರಲ್ಲಿ ಹಾಗೂ ಮೀಸಲಿಸಿರುವ ಅನುದಾನದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುವುದು. ಅಲ್ಲದೆ, ಸರ್ಕಾರಿ ಅಥವಾ ಅನುದಾನಿತ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೀಟು ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಸಮುದಾಯಗಳ ವಿದ್ಯಾರ್ಥಿಗಳಿಗೆ ಶೇಕಡಾ 50ರಷ್ಟು ಪ್ರವೇಶ ಶುಲ್ಕವನ್ನು ಮರುಪಾವತಿ ಮಾಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡುವುದು.

ಹಿರಿಯೂರು ನಗರಸಭೆ ವ್ಯಾಪ್ತಿಯ ಅರ್ಹ ದಿವ್ಯಾಂಗ ವಿಕಲ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಪರಿಶಿಷ್ಟ ಜಾತಿಯ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಉತ್ತೇಜನ ನೀಡಲು ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಎಲ್ಲ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಮೇ 08 ರಿಂದ 22 ರವರೆಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯೂರು ನಗರಸಭೆ ಪೌರಾಯುಕ್ತ ಎ.ವಾಸೀಂ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon