ಬೆಂಗಳೂರು: ರಾಜ್ಯ ಸರ್ಕಾರ ಮನೆ ನಿರ್ಮಾಣ ಸಬ್ಸಿಡಿ ಹಣವನ್ನು ಹೆಚ್ಚಿಸಲು ತೀರ್ಮಾನಿಸಿದ್ದು, ಮುಂದಿನ ಬಜೆಟ್ನಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಅನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ₹1.20 ಲಕ್ಷವನ್ನು ₹3 ಲಕ್ಷಕ್ಕೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ₹1.60 ಲಕ್ಷವನ್ನು ₹3.5 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಸಬ್ಸಿಡಿ ಹೆಚ್ಚಳದಿಂದ ಬಡವರಿಗೆ ಸೌಲಭ್ಯ ಹೆಚ್ಚಾಗಲಿದ್ದು, ಪೂರ್ಣಗೊಳ್ಳದ 9 ಲಕ್ಷ ಮನೆಗಳ ಕಾಮಗಾರಿಯನ್ನು ವೇಗಗೊಳಿಸಲು ಕಳೆದ ವರ್ಷ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು.