ಬೆಂಗಳೂರು : ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದಿದ್ದ ಮಹೇಶ್ ಶೆಟ್ಟಿ ತಿಮ್ಮರೋಡಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಹೋರಾಟಗಾರರಾದ ತಿಮರೋಡಿ ಅವರ ವಿರುದ್ಧ ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಕೂಡಲೇ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರ ಮೇಲೆ ಎಫ್‌ಐಆರ್ ದಾಖಲಿಸಿ ಬಂಧನ ಮಾಡುವಂತೆ ಸದನದಲ್ಲಿಯೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ’24 ಕೊಲೆಗಳನ್ನು ಮಾಡಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಬಿಎನ್‌ಎಸ್ ಕಾಯ್ದೆಯಡಿ ಅವಹೇಳನೆ ಮಾಡಿದ ಆರೋಪದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ತಿಮರೋಡಿ ಹೇಳಿಕೆ ಮತ್ತು ಸರ್ಕಾರದ ಕ್ರಮ:
ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತಿಮರೋಡಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವರು ನೀಡಿರುವ ಸೂಚನೆಯ ಮೇರೆಗೆ, ಪೊಲೀಸರು ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಬಂಧನವಾಗುವ ಸಾಧ್ಯತೆಯಿದೆ.