ಧರ್ಮಸ್ಥಳ ಪ್ರಕರಣದ ತನಿಖೆ ಆದಷ್ಟು ಬೇಗ ಮುಕ್ತಾಯವಾಗಲಿದ್ದು, ಇಡೀ ತನಿಖೆಯನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಎಸ್ಐಟಿಗೆ ತಿಳಿಸಿದ್ದೇವೆ ಎಂಬುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್ಐಟಿಯಿಂದ ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್ಎಸ್ಎಲ್ಗೆ ಕಳಿಸಲಾಗಿದೆ. ಎಲ್ಲವನ್ನೂ ಅಂತಿಮಗೊಳಿಸಿ ವರದಿ ಕೊಡಲು ಎಸ್ಐಟಿಗೆ ಹೇಳಿದ್ದೇವೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ ಎಸ್ಐಟಿಗೆ ತಿಳಿಸಿದ್ದೇವೆ. ಸುಪ್ರೀಂಕೋರ್ಟ್ನಲ್ಲಿ ಚಿನ್ನಯ್ಯನ ಪಿಐಎಲ್ ವಜಾ ಆದ ವಿಚಾರವನ್ನೂ ಎಸ್ಐಟಿಯವರು ವರದಿಯಲ್ಲಿ ಸೇರಿಸಿಯೇ ಕೊಡ್ತಾರೆ. ಹೊಸ ದೂರುಗಳು ಬಂದಿವೆ. ಹಲವರು ಹೇಳಿಕೆಗಳನ್ನು ಕೊಡ್ತಿದ್ದಾರೆ. ಇದಕ್ಕೆಲ್ಲ ಅಂತಿಮ ಹಾಡಲು ಹೇಳಿದ್ದೇವೆ ಎಂದು ಹೇಳಿದ್ದಾರೆ.