ಬೆಂಗಳೂರು : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸುದ್ದಿ ಸುದ್ದು ಮಾಡಿದೆ. ಹಿರಿಯ ಸಚಿವ ಕೆಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸುವ ಯತ್ನ ನಡೆದಿದೆ. ಈ ಬಗ್ಗೆ ರಾಜಣ್ಣ ಇಂದು ಸದದನಲ್ಲಿ ಬಹಿರಂಗಪಡಿಸಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಸಾರ್ವಜನಿಕ ಜೀವನದಲ್ಲಿ ಹೀಗಾಗಬಾರದು. ಅವರು ಯಾರೇ ಇರಲಿ ಬಹಿರಂಗ ಆಗಲಿ. ವಾಸ್ತವ ಏನು ಎಂಬುದನ್ನ ಜನರಿಗೆ ಗೊತ್ತಾಗಬೇಕು. ಇದರ ತನಿಖೆಯನ್ನ ಮಾಡಿಸಬೇಕು ಎಂದು ಗೃಹ ಮಂತ್ರಿಗಳಿಗೆ ನಾನು ಒತ್ತಾಯಿಸುತ್ತೇನೆ. ಇದರಲ್ಲಿ ಯಾರೆಲ್ಲಾ ಇದ್ದಾರೆ. ಇದರ ಪ್ರೊಡ್ಯೂಸರ್ ಯಾರು. ಎಲ್ಲಾ ತನಿಖೆ ಮೂಲಕ ಹೊರಗೆ ಬರಬೇಕು. ಇದೊಂದು ಪಿಡುಗು, ಸಾರ್ವಜನಿಕವಾಗಿ ಬಹಿರಂಗವಾಗಬೇಕು. ಈ ಬಗ್ಗೆ ಲಿಖಿತ ದೂರು ನೀಡುತ್ತೇನೆ ಎಂದರು.
ಇನ್ನು ರಾಜಣ್ಣ ಅವರ ಈ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ರಾಜಣ್ಣ ಅವರು ಲಿಖಿತ ದೂರು ನೀಡುವುದಾಗಿ ಹೇಳಿದ್ದಾರೆ. ಲಿಖಿತ ದೂರು ನೀಡಿದರೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವುದಾಗಿ ಸ್ಪಷ್ಟಪಡಿಸಿದರು.