ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್ಮೇಲ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ.
ಪಟ್ಟಣದಲ್ಲಿ ಎಳನೀರು ಮಾರಾಟ ಮಾಡುತ್ತಿದ್ದ 44 ವರ್ಷದ ಮಹಿಳೆ ಸರ್ಕಾರಿ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಸಲುಗೆ ಬೆಳೆಸಿ ಕಳೆದ ನವೆಂಬರ್ 1 ರಂದು ತನ್ನ ಗೆಳೆತಿ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ನಡೆಸಿದ್ದರು.
ಇದೇ ವೇಳೆ ಮನೆಯ ಕಿಟಿಕಿಯಲ್ಲಿ ಮೊಬೈಲ್ ಇಟ್ಟಿದ್ದನ್ನು ಕಂಡ ಮ್ಯಾನೇಜರ್, ಪ್ರಶ್ನೆ ಮಾಡಿದಾಗ ಫೋನ್ ಕೆಟ್ಟಿದೆ ಎಂದು ಸಬೂಬು ಹೇಳಿದ್ದರು. ಬಳಿಕ ನವೆಂಬರ್ 5 ರಂದು ಬ್ಯಾಂಕ್ ಮ್ಯಾನೇಜರ್ಗೆ ಕರೆ ಮಾಡಿದ ಮಹಿಳೆ , ನಾವಿಬ್ಬರು ಏಕಾಂತದಲ್ಲಿರುವುದನ್ನು ಯಾರೋ ವಿಡಿಯೋ ಮಾಡಿದ್ದಾರೆ. ಅವರ ಬಳಿ ಮಾತನಾಡಿ ಬಗೆ ಹರಿಸಿಕೊಳ್ಳಿ ಎಂದು ಹೇಳಿದ್ದರು. ಇದೇ ವೇಳೆ ಮಹಿಳೆಯ ಅಳಿಯ ಮಹೇಶ ಬಗಲಿ, ಪತ್ರಕರ್ತ ತೌಶೀಫ್ ಖುರೇಷಿ ಎನ್ನುವವರಿಗೆ ನಿಮ್ಮಿಬ್ಬರ ವಿಡಿಯೋ ಸಿಕ್ಕಿವೆ ಎಂದು ಮ್ಯಾನೇಜರ್ಗೆ ಬೆದರಿಸಿದ್ದ.
ಈ ಹೇಯ ಕೃತ್ಯದಲ್ಲಿ ಮಹಿಳೆಯ ಸ್ವಂತ ಮಗನೂ ಸೇರಿದ್ದನೆಂಬುದು ತಿಳಿದುಬಂದಿದೆ. ತೌಶೀಫ್ ಖುರೇಷಿ, ಮಹೇಶ ಬಗಲಿ ಹಾಗೂ ಮಹಿಳೆಯ ಪುತ್ರ ಅಮೂಲ್ ಸೇರಿಕೊಂಡು ಬ್ಯಾಂಕ್ ಮ್ಯಾನೇಜರ್ ಬಳಿ ಬಂದು ಎಲ್ಲಾ ಬಗೆಹರಿಸಿಕೊಳ್ಳಿ. ಎಲ್ಲರಿಗೂ ಸೇರಿದಂತೆ 10 ಲಕ್ಷ ಹಣ ನೀಡಬೇಕು. ಇಲ್ಲವಾದರೆ ಮಾಧ್ಯಮಗಳಲ್ಲಿ ವಿಡಿಯೋ ಲೀಕ್ ಮಾಡಲಾಗುತ್ತದೆ ಎಂದು ಹೆದರಿಸಿದ್ದಾರೆ. ಇದರಿಂದ ಭಯಗೊಂಡ ಬ್ಯಾಂಕ್ ಮ್ಯಾನೇಜರ್ ಇಂಡಿ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
































