ಬೆಂಗಳೂರು: ರಾಜ್ಯದಲ್ಲಿ ತರಕಾರಿಗಳ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಾಳೆಯಿಂದ ಹೋಟೆಲ್ ಆಹಾರದ ಬೆಲೆಯಲ್ಲಿ ಶೇ.10ರಷ್ಟು ಬೆಲೆ ಏರಿಕೆಗೆ ಹೋಟೆಲ್ ಮಾಲೀಕರ ಅಸೋಸಿಯೇಷನ್ ನಿರ್ಧರಿಸಿದೆ.
ಮಧ್ಯರಾತ್ರಿಯಿಂದಲೇ ಪರಿಷ್ಕೃತ ಆಹಾರ ದರಗಳು ಜಾರಿಗೆ ಬರಲಿವೆ ಎಂದು ತಿಳಿದುಬಂದಿದೆ. ಹಾಲಿನ ಬೆಲೆ, ಸಿಲಿಂಡರ್ ಬೆಲೆ, ತರಕಾರಿಗಳ ಬೆಲೆ ಏರಿಕೆಯಿಂದಾಗಿ ಹೋಟೆಲ್ ಆಹಾರದ ದರ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿದುಬಂದಿದೆ.