ಬೆಂಗಳೂರು: ನಟ ಚೇತನ್ ವರನಟ ಡಾ. ರಾಜ್ಕುಮಾರ್ ಸಮಾಧಿಗೆ ನೀಡಿರುವ ಜಾಗದ ಬಗ್ಗೆ ವಿವಾದವನ್ನು ಹುಟ್ಟುಹಾಕಿದ್ದಾರೆ.
ರಾಜ್ಕುಮಾರ್ ಅವರ ಹುಟ್ಟುಹಬ್ಬದ ದಿನ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಅವರು ಒಬ್ಬ ನಟನ ಸಮಾಧಿಗೆ 2.5 ಎಕರೆ ಜಾಗ ನೀಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದರು.
ನಾವು ರಾಜಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ ‘ಸಮಾಧಿ ಕಾಂಪ್ಲೆಕ್ಸ್’ ಗಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ’ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದರು.

































